ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಬಣಕಲ್ ಮೂಡಿಗೆರೆ ನಡುವಿನ ಹೊರಟ್ಟಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಮೂಡಿಗೆರೆ ತಾಲ್ಲೂಕು ಬಾಳೂರಿನ ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್, ಸುಮತಿ ದಂಪತಿಗಳ ಪುತ್ರ ಅಕ್ಷಯ್ (22) ಮೃತ ಯುವಕ ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ವಿಕಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎನ್ನಲಾಗಿದೆ.
ಮೂಡಿಗೆರೆ ಕಡೆಗೆ ಬರುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಯಿಂದ ಹೊರನಾಡು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲಾಗಿದೆ. ಗಾಯಗೊಂಡವರನ್ನು ಗಂಗಯ್ಯ, ಹರ್ಷ, ಶ್ರೀಮತಿ ವಿಜಯ ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post