ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಭಾರೀ ಮಳೆಯ #Heavy rain ಪರಿಣಾಮ ರಾಜ್ಯದಲ್ಲಿ ಅನಾಹುತಗಳು ಮುಂದುವರೆದಿದ್ದು, ಹಾಸನದ ಶಿರಾಡಿ ಘಾಟ್ #Shiradi ghat ರಸ್ತೆಯಲ್ಲಿ ಇಂದು ಮಧ್ಯಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು, ಈ ರಸ್ತೆಯಲ್ಲಿ ಸಂಚಾರ ಬಂದ್ ಆಗಿದೆ.
ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ ಆತಂಕ ಎದುರಾಗಿದೆ. ಬೆಂಗಳೂರು-ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್ ಭೂಕುಸಿತವಾಗಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.

Also read: ಒಲಂಪಿಕ್ಸ್’ನಲ್ಲಿ ಭಾರತಕ್ಕೆ ಮತ್ತೊಂದು ಗರಿ | ಏರ್ ಪಿಸ್ತೂಲ್ | ಸಿಂಗ್-ಮನು ಜೋಡಿಗೆ ಕಂಚಿನ ಪದಕ
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿಗಳು ಶಿರಾಡಿ ಘಾಟ್ ಬಳಸಿ ವಾಹನಗಳು ಸಂಚಾರ ಮಾಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದಿದ್ದಾರೆ.

ಇದೇ ವೇಳೆ ತೆರವು ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದ್ದು, ಮತ್ತಷ್ಟು ಗುಡ್ಡ ಕುಸಿತದ ಆತಂಕವೂ ಸಹ ಹೆಚ್ಚಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯುವ ಭೀತಿಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post