ಕಲ್ಪ ಮೀಡಿಯಾ ಹೌಸ್
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದೆ. ಹಾಗೂ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.
ಮಳೆ, ಪ್ರವಾಹ ಸಂಬಂಧಿತ ಅನಾಹುತ ತಡೆಗೆ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ. ಕೆಲವೆಡೆ ನಿನ್ನೆ ರಾತ್ರಿಯಿಂದಲೆ ಮಳೆ ಆರಂಭವಾಗಿದ್ದು, ಇಂದೂ ಮುಂದುವರೆದಿದೆ. ಮಳೆಯ ಜೊತೆಗೆ ಗಾಳಿಯ ವೇಗ ತೀವ್ರವಾಗಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.
ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಪ್ರದೇಶದಲ್ಲಿ ಇನ್ನೂ ಕೆಲ ದಿನಗಳ ಮಟ್ಟಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post