ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಮುಂಗಾರು ಮಳೆ #Monsoon Rain ಕರ್ನಾಟಕ ಪ್ರವೇಶಿಸಿದೆ. ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು, #Heavy Rain ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ.
ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮೇ 27 ಮತ್ತು ಮೇ 28ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ #Holiday for Schools and Colleges ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ, ಫೌಡಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post