ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಈದ್ಗಾ ಮೈದಾನ ಯಾರಪ್ಪನ ಆಸ್ತಿಯಲ್ಲ. ಅದು ಸರ್ಕಾರಿ ಆಸ್ತಿಯಾಗಿರುವುದರಿಂದ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬೇಕು ಎಂದು ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ Nalin Kumar Kateel ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಜಾಗ. ಹೀಗಾಗಿ, ಇಲ್ಲ ಗಣೇಶೋತ್ಸವಕ್ಕೆ ಅವಕಾಶ ನೀಡಲ್ಲ ಎಂದು ಹೇಳುವ ಅಧಿಕಾರ ಬೇರೆ ಯಾರಿಗೂ ಇಲ್ಲ. ಗಣೇಶೋತ್ಸವ ಮಾಡಲು ಅರ್ಜಿಯನ್ನು ಯಾರಾದರೂ ನೀಡಿದರೆ, ಅದನ್ನು ಪರಿಶೀಲಿಸಿ ಅವಕಾಶ ನೀಡಬೇಕು. ಸಾರ್ವಜನಿಕ ಮೈದಾನದಲ್ಲಿ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮಾಡಲು ಅವಕಾಶವಿದೆ ಎಂದಿದ್ದಾರೆ.
Also read: ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post