ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 39,15,000 ರೂ. ಮೌಲ್ಯದ 132 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ರಮೀಝ್ ರಾಝ್ (30), ಅಬ್ದುಲ್ ಖಾದರ್ ಹ್ಯಾರಿಸ್ (31) ನನ್ನು ಬಂಧಿಸಲಾಗಿದ್ದು, ಆರೋಪಿಗಳು ಮಾದಕ ವಸ್ತು ಸಾಗಾಣೆಗೆ ಬಳಸುತ್ತಿದ್ದ ಕಾರು, 2 ಮೊಬೈಲ್ ಫೋನ್, 3 ತಲವಾರು ಹಾಗೂ ನಗದು 2180ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















