ಕಲ್ಪ ಮೀಡಿಯಾ ಹೌಸ್
ಮಂಗಳೂರು: ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದ್ದು, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.
ಆದರೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿಸಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದು ತಿಳಿದಿಬಂದಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post