ಕಲ್ಪ ಮೀಡಿಯಾ ಹೌಸ್
ಮಂಗಳೂರು: ಮಾಸ್ಕ್ ಧರಿಸದೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದವರನ್ನು ವಶಕ್ಕೆ ಪಡೆದ ಘಟನೆ ನಡೆದಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದರಿಂದ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಬಡವರ ಮೇಲೆ ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳು ಅಧಿಕಾರ ಚಲಾಯಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಬಿಸಿಲಿನ ತಾಪ ಹೆಚ್ಚಾಗಿದ್ದು ಮಾಸ್ಕ್ ಧರಿಸಿಕೊಂಡು ಕೆಲಸ ನಿರ್ವಹಿಸುವುದು ಕಷ್ಟವಾಗಿದೆ. ಈ ಬಿಸಿಲಿನ ಬೇಗೆಯಲ್ಲಿ ಪೊಲೀಸರೇ ಮಾಸ್ಕ್ ಧರಿಸಲು ಕಷ್ಟ ಪಡುತ್ತಿದ್ದು, ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















