ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ತನ್ನ 4 ವರ್ಷದ ಮಗುವಿನೊಂದಿಗೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ ಮಹಿಳೆ ತನ್ನ 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. ಇಬ್ಬರು ಮಕ್ಕಳ ಜತೆಗೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಇನ್ನೋರ್ವ ಮಗಳು ನೇಣಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















