ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಬೀದರ್ ಎಟಿಎಂ ದರೋಡೆ ಪ್ರಕರಣ #Bidar ATM Robbery ಮಾಸುವ ಮುನ್ನವೇ ಅತಂಹುದೇ ಇನ್ನೊಂದು ಘಟನೆ ಸಂಭವಿಸಿದ್ದು, ಮಂಗಳೂರಿನ ಸಹಕಾರಿ ಬ್ಯಾಂಕ್‌ಗೆ #Mangalore Bank Robbery ನುಗ್ಗಿದ ಕಳ್ಳರ ಗುಂಪು ಬರೋಬ್ಬರಿ 12ಕೋಟಿ ರೂ. ದೋಚಿ ಪರಾರಿಯಾಗಿರುವುದಾಗಿ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಕಳ್ಳರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
Also read: ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post