ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಮುರುಘಾ ಶರಣರ ಬಂಧನ ಬಗ್ಗೆ ಈ ಹೊತ್ತಿನಲ್ಲಿ ಮಾತನಾಡುವುದು ಸರಿಯಲ್ಲ. ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹಾಗಾಗಿ ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಹೇಳಿದ್ದಾರೆ.
ಇಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೆಳಗ್ಗೆಯೇ ಮಂಗಳೂರಿಗೆ ತೆರಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















