ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಹಿಜಬ್ಗೆ HIjab ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಹಿಂಪಡೆಯುವ ಮೂಲಕ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಬ್ ಸಮರವನ್ನು ಮುಂದುವರೆಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ. ಕರಾವಳಿ ಭಾಗದ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ಟಿಸಿಯನ್ನು ಹಿಂಪಡೆದಿದ್ದಾರೆ. ಅದರಲ್ಲಿ ಸರ್ಕಾರಿ ಕಾಲೇಜಿನ 34%, ಅನುದಾನಿತ ಕಾಲೇಜಿನ 13% ವಿದ್ಯಾರ್ಥಿನಿಯರಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಹಿಜಬ್ ಹೋರಾಟಗಾರ್ತಿ ಗೌಸಿಯಾ ಹಿಜಬ್ ಧರಿಸಲು ಅವಕಾಶ ಇಲ್ಲದ ಕಾರಣ ಕಾಲೇಜಿನಿಂದ ಟಿಸಿ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿ, ವಿದ್ಯಾರ್ಥಿನಿಯರು ಟಿಸಿ ಪಡೆಯಲು ಸಚಿವ ಬಿ.ಸಿ ನಾಗೇಶ್ ಅವರೇ ಮುಖ್ಯ ಕಾರಣರಾಗಿದ್ದಾರೆ. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ಅವರು ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೆ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ ಶೇ. 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.
Also read: ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post