ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ರಾಜ್ಯದ ಕರಾವಳಿಯ ಮಂಗಳೂರು ಹಾಗೂ #TamilNadu ತಮಿಳುನಾಡಿನ ನಾಗರಕೊಯಿಲ್ ಜಂಕ್ಷನ್ #Nagercoil ನಡುವೆ ಹೊಸದಾಗಿ ಅಮೃತ್ ಭಾರತ್ ಎಕ್ಸ್’ಪ್ರೆಸ್ ರೈಲು ಸೇವೆ ಆರಂಭಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಕ್ಷಿಣದ ಎರಡೂ ರಾಜ್ಯಗಳ ಪ್ರಮುಖ ಕರಾವಳಿ #Coastal ನಗರಗಳಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈ ರೈಲು ಮಹತ್ವದ್ದಾಗಿದ್ದು, ಪ್ರಯಾಣಿಕರಿಗೆ ಸುಗಮ ಹಾಗೂ ವೇಗದ ಪ್ರಯಾಣಕ್ಕೆ ನೆರವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಹೀಗಿದೆ ರೈಲು ಸಂಚಾರ ವೇಳಾಪಟ್ಟಿ
ನಾಗರಕೋಯಿಲ್ ಜಂಕ್ಷನ್-ಮಂಗಳೂರು ಜಂಕ್ಷನ್(ರೈಲು ಸಂಖ್ಯೆ 16329): ಈ ರೈಲು ಪ್ರತೀ ಮಂಗಳವಾರ ಬೆಳಗ್ಗೆ 11.40ಕ್ಕೆ ನಾಗರಕೋಯಿಲ್ ಜಂಕ್ಷನ್’ನಿಂದ ಹೊರಟು ಮರುದಿನ ಬೆಳಗ್ಗೆ 5 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮಂಗಳೂರು ಜಂಕ್ಷನ್-ನಾಗರಕೋಯಿಲ್ ಜಂಕ್ಷನ್(ರೈಲು ಸಂಖ್ಯೆ 16330):
ಈ ರೈಲು ಪ್ರತೀ ಬುಧವಾರ ಬೆಳಗ್ಗೆ 8 ಗಂಟೆಗೆ #MangaloreJunction ಮಂಗಳೂರು ಜಂಕ್ಷನ್’ನಿಂದ ಹೊರಟು, ಅದೇ ದಿನ ರಾತ್ರಿ 8.05ಕ್ಕೆ ನಾಗರಕೋಯಿಲ್ ಜಂಕ್ಷನ್ ತಲುಪಲಿದೆ.
ಎಲ್ಲೆಲ್ಲೆ ನಿಲುಗಡೆ?
ಈ ಹೊಸ #AmritBharatExpress ಅಮೃತ್ ಭಾರತ್ ಎಕ್ಸ್’ಪ್ರೆಸ್ ರೈಲು ಶೋರ್ನೂರ್ ಜಂಕ್ಷನ್, ತಿರೂರ್, ತಲಕ್ಕೇರಿ, #Kozhikode ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು #Kasaragod ನಿಲ್ದಾಣಗಳ ಮೂಲಕ ಸಂಚರಿಸಲಿದೆ.
ಅಲ್ಲದೇ, ಪ್ರಯಾಣಿಕರ ಬೇಡಿಕೆ ಮತ್ತು ಅನುಕೂಲತೆಯನ್ನು ಗಮನದಲ್ಲಿಟ್ಟು ರೈಲಿಗೆ ಹೆಚ್ಚುವರಿಯಾಗಿ ಕೆಳಗಿನ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ಅದರಂತೆ ತಿರುವನಂತಪುರಂ ಸೆಂಟ್ರಲ್, ವರ್ಕಲ, ಕೊಲ್ಲಂ ಜಂಕ್ಷನ್, ಕರುನಾಗಪಲ್ಲಿ, ಕಾಯಂಕುಲಂ ಜಂಕ್ಷನ್, ಮಾವೇಲಿಕ್ಕರ, ಚೆಂಗನ್ನೂರು, ತಿರುವಲ್ಲಾ, ಚಂಗನಾಕ್ಕೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಆಲುವಾ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















