ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು #Praveen Nettaru ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ರಿಯಾಜ್ ಯೂಸಫ್ ಎಂಬಾತ ವಿದೇಶಕ್ಕೆ ಹಾರಿ ಎಸ್ಕೇಪ್ ಆಗಲು ಯತ್ನಿಸಿದ್ದು, ಕೊನೇ ಕ್ಷಣದಲ್ಲಿ ಆತನನ್ನು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್’ಐಎ ಅಧಿಕಾರಿಗಳು ರಿಯಾಜನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್’ನನ್ನು ಬಂಧಿಸಿದ್ದರು. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
Also read: ಲಾಭಿ ಆರಂಭ | ಅಬ್ಬಬ್ಬಾ! ಬಿಜೆಪಿ ಮುಂದೆ ನಾಯ್ಡು, ನಿತೀಶ್ ಇಟ್ಟ ಡಿಮ್ಯಾಂಡ್ ಏನು ನೋಡಿ!
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಗಾಯಗೊಂಡಿದ್ದ ಪ್ರವೀಣನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಪ್ರಕರಣದ ತನಿಖೆಯನ್ನು ಎನ್’ಐಎಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈವರೆಗೂ ಪ್ರಕರಣದಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post