ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಎಸ್‌ಡಿಪಿಐ, ಪಿಎಫ್‌ಐ SDPI, PFI ಕಚೇರಿ ಮತ್ತು ನಾಯಕರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ NIA ದೇಶಾದ್ಯಂತ 10 ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ಕಚೇರಿಯ ಒಳಗೆ ನುಗ್ಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎನ್‍ಐಎ ಅಧಿಕಾರಿಗಳು ಇಂದು ಎಸ್‍ಡಿಪಿಐ ಕಚೇರಿಯ ಬೀಗವನ್ನು ಬ್ಲೇಡ್‍ನಿಂದ ಕಟ್ ಮಾಡಿ ಕಚೇರಿಯ ಶಟರ್ ಒಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರಿಗಳು ಒಳಭಾಗದ ಡೋರ್‌ನ ಗಾಜನ್ನು ಪುಡಿ ಮಾಡಿ, ಕಚೇರಿಯೊಳಗೆ ನುಗ್ಗಿ ಹಲವು ಮಹತ್ವದ ದಾಖಲೆ ಮತ್ತು ಕಂಪ್ಯೂಟರ್ ಸಿಪಿಯುನ ಹಾರ್ಡ್‍ಡಿಸ್ಕ್‌ನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಎಸ್‍ಡಿಪಿಐ ರಾಜ್ಯ ಮುಖಂಡ ಈ ಬಗ್ಗೆ ಮಾತನಾಡಿ, ದಾಳಿ ಮಾಡುವ ಸಂದರ್ಭದಲ್ಲಿ ಕಚೇರಿಯಲ್ಲಿ ಸಿಬ್ಬಂದಿಯಿದ್ದ. ಆತ ಎನ್‍ಐಎ ಅಧಿಕಾರಿಗಳ ಬಳಿ ಪ್ರಶ್ನಿಸುವ ಮೊದಲೇ ಕಚೇರಿಯ ಬೀಗವನ್ನು ಒಡೆದು ನುಗ್ಗಿದ್ದಾರೆ. ಒಂದು ರೀತಿಯ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಈ ರೀತಿಯ ಘಟನೆಯನ್ನು ಎಸ್‍ಡಿಪಿಐ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಕರ್ನಾಟಕ, ಉತ್ತರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಎನ್‍ಐಎ ಇತಿಹಾಸದಲ್ಲಿ ಅತಿ ದೊಡ್ಡ ದಾಳಿ ಇದಾಗಿದೆ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















