ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಖಾಸಗಿ ವಾಹಿನಿಯ ಪತ್ರಕರ್ತನ #Journalist ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣನವರ್, #Girish Mattannavar ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ #Youtuber Sameer ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ವರದಿಗಾರ ಹರೀಶ್ ದೂರಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಲ್ಲಿ #Dharmasthala ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ಘಟನೆಗೆ ಸಂಬಂಧಪಟ್ಟಂತೆ ಹಲ್ಲೆಗೊಳಗಾದವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದ ಗಿರೀಶ್ ಮಟ್ಟಣನವರ್ ಬಳಿ ಬೈಟ್ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು. ಈ ವೇಳೆ ಅಲ್ಲೇ ಇದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳು ಹಲ್ಲೆ ಮಾಡಿದ್ದಾರೆ.
ಈ ವೇಳೆ ಕೀಳು ಭಾಷೆಯಿಂದ ನಿಂದಿಸಿದ್ದಲ್ಲದೆ, ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ವರದಿಗಾರ ಹರೀಶ್ ಅವರ ದೂರಿನಂತೆ ಬಿಎನ್‌ಎಸ್ ಸೆಕ್ಷನ್ 115(2), 189(2), 191(2), 351(2), 352, 190 ಅಡಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್ ಮಟ್ಟಣನವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), ಜಯಂತ್ (ಎ4) ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post