ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಘಟನೆ ಪೂರ್ವ ನಿಯೋಜಿತ ಎಂಬ ವಿಚಾರ ಹೊರಬಿದ್ದಿದ್ದು, ಗಲಭೆ ನಡೆಸಲೆಂದೇ ಸಂಚು ರೂಪಿಸಲಾಗಿತ್ತು ಎಂದು ಹೇಳಲಾಗಿದೆ.
ಗಲಭೆ ಕುರಿತಂತೆ ಮಂಗಳೂರು ನಗರ ಪೊಲೀಸರು ವೀಡಿಯೋಗಳನ್ನು ಬಿಡುಗಡೆ ಮಾಡಿದ್ದು, ಗಲಭೆ ನಡೆದ ಪ್ರದೇಶದಲ್ಲಿ ಗೂಡ್ಸ್ ಆಟೋವೊಂದರಲ್ಲಿ ಕಲ್ಲು ತುಂಬಿದ್ದ ಮೂಟೆಗಳನ್ನು ಮೊದಲೇ ನಿಲ್ಲಿಸಲಾಗಿತ್ತು. ಅದರಲ್ಲಿನ ಕಲ್ಲುಗಳನ್ನು ತೆಗೆದುಕೊಂಡು ಪುಂಡರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಸಿಸಿಟಿವಿಯಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಪ್ರತಿಭಟನಾಕಾರರ ಕಲ್ಲು ತೂರಾಟ ಮಾಡುವ ಜೊತೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಉದ್ದೇಶಪೂರ್ವಕವಾಗಿ ಧ್ವಂಸ ಮಾಡಿರುವುದು ಸ್ಪಷ್ಟವಾಗಿ ದಾಖಲಾಗಿದೆ.
ಕಲ್ಲು ತೂರಾಟ ಹಾಗೂ ದೊಂಬಿಗೆ ಸಂಬಂಧಿಸಿದಂತೆ ಹಲವು ವೀಡಿಯೋಗಳನ್ನು ಮಂಗಳೂರು ಪೊಲೀಸರು ಫೇಸ್’ಬುಕ್’ನಲ್ಲಿ ಶೇರ್ ಮಾಡಿದ್ದು, ಆರೋಪಿಗಳ ಪತ್ತೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಕೋರಿದ್ದು, ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡುವುದಾಗಿ ಭರವಸೆ ನೀಡಿದ್ದಾರೆ.
ಇನ್ನು, ಗಲಭೆ ನಡೆಸುವ ವೇಳೆ ಅಲ್ಲಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಕಾಣದಂತೆ ಪ್ರತಿಭಟನಾಕಾರರು ಬೇರೆಡೆಗೆ ತಿರುಗಿಸಿರುವುದು, ಕೆಲವನ್ನು ಹಾನಿ ಮಾಡಿವುದು ಕುರಿತಂತೆ ಬಿಡುಗಡೆಯಾಗಿರುವ ವೀಡಿಯೋಗಳಲ್ಲಿ ದಾಖಲಾಗಿದೆ ಎಂಬುದನ್ನು ಗಮನಿಸಿದಾಗ ಅತ್ಯಂತ ವ್ಯವಸ್ಥಿತವಾಗಿ ಗಲಭೆಗೆ ಸಂಚು ರೂಪಿಸಲಾಗಿದೆ ಎಂಬುದು ತಿಳಿಯುತ್ತದೆ.
Get in Touch With Us info@kalpa.news Whatsapp: 9481252093
Discussion about this post