ಕಲ್ಪ ಮೀಡಿಯಾ ಹೌಸ್ | ಮಂಗಳೂರು/ಸಾಗರ |
ಕಳೆದ 24 ಗಂಟೆಗಳಿಂದ ಮಲೆನಾಡು ಮತ್ತು ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ನಾಳೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಂದು ದ.ಕ. ಜಿಲ್ಲಾಧಿರಿ ತಿಳಿಸಿದ್ದಾರೆ.
ನಾಳೆಯೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ, ಸ್ನಾತ್ತಕೋತ್ತರ ಪದವಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:
ಸಾಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ತಹಸೀಲ್ದಾರರೊಂದಿಗೆ ಚರ್ಚಿಸಿ, ಜು.7ರ ಗುರುವಾರ ಸಾಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಬಿಇಒ ಸಾಗರ್ ತಿಳಿಸಿದ್ದಾರೆ.
Also read: ದೀಪ ನಂದುವಾಗ ಜೋರಾಗಿ ಉರಿಯುವಂತಿದೆ ಕಾಂಗ್ರೆಸ್‌ನ ಆರ್ಭಟ! ಶಾಸಕ ಈಶ್ವರಪ್ಪ ಲೇವಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post