ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಜನರ ಕಷ್ಟಕ್ಕೆ ಸ್ಪಂದಿಸದೇ ಹೊಣೆಗೇಡಿತನ ಪ್ರದರ್ಶಿಸುತ್ತಾ, ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ BYVijayendra ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ರೋಮ್ ಹೊತ್ತಿ ಉರಿಯಲು ದೊರೆ ಪಿಟೀಲು ಬಾರಿಸಿದ ಪರಿಸ್ಥಿತಿ ರಾಜ್ಯದಲ್ಲಿ ಇದೆ. ಆಡಳಿತಕ್ಕೆ ಬಂದು ಆರು ತಿಂಗಳಾದರೂ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಮೋಜಿನಲ್ಲಿ ಮುಳುಗಿದೆ. ಇದು ನಾಡಿನ ರೈತರಿಗೆ ಮಾಡುವ ಅವಮಾನ. ಪದೇಪದೇ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಾರೆ. ಹಾಗಿದ್ದರೆ ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
ಹಿಂದೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಕೊರತೆ ಆಗದಿರಲಿ ಎಂದು ದಿನಕ್ಕೆ ಕನಿಷ್ಠ 7 ಗಂಟೆ ವಿದ್ಯುತ್ ಪೂರೈಕೆ ಮಾಡಿದ್ದೆವು. ವಿದ್ಯುತ್ ಕೊರತೆ ಆದಾಗ ಹೊರ ರಾಜ್ಯದಿಂದ ಖರೀದಿಸಿ ರೈತರಿಗೆ ಪೂರೈಕೆ ಮಾಡಲಾಗಿತ್ತು. ಆದರೆ, ಮುಂಗಾರು ಹಾಗೂ ಹಿಂಗಾರು ವೈಫಲ್ಯವಾಗಿದ್ದರೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಹೊಣೆಗೇಡಿಯಾಗಿ ವರ್ತಿಸುತ್ತಿದೆ ಎಂದು ಚಾಟಿ ಬೀಸಿದರು.
Also read: ಕಬ್ಬಿಣದ ಸ್ಲೈಡಿಂಗ್ ಗೇಟ್ ಬಿದ್ದು 3 ವರ್ಷದ ಬಾಲಕ ದುರ್ಮರಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post