ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು ಹಲವರು ಗಂಭೀರ ಗಾಯಗೊಂಡ ಘಟನೆ ಗಾಜನೂರು ಬಳಿ ನಡೆದಿದೆ.
ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತಪಟ್ಟಿದ್ದು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.
ಡಿಕ್ಕಿ ಹೊಡೆದ ಬಸ್ ಮಂಗಳೂರಿನಿಂದ ಚಳ್ಳಕೆರೆಗೆ ತೆರೆಳುತ್ತಿತ್ತು.
ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್(20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32) ಎಂಬುವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಗೆ ತೆರಳುತಿತ್ತು ಎಂದು ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ಸಿನ ಎಡ ಭಾಗ ಸಂಪೂರ್ಣ ಹಾನಿಯಾಗಿದ್ದು ಬಸ್ಸಿನ ಸೀಟುಗಳು ಕಿತ್ತು ಬಂದಿವೆ.
ತುಂಗಾ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post