ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಕರಾವಳ ಭಾಗದ ಜನರ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸಂಪರ್ಕ ಶೀಘ್ರವೇ ಮಂಗಳೂರಿಗೆ ದೊರೆಯಲಿದೆ ಎಂದು ಸಂಸದ ನಳೀನ್ ಕುಮಾರ್ MP Nalinkumar ಹೇಳಿದ್ದಾರೆ.
ಈ ಕುರಿತಂತೆ `ಎಕ್ಸ್'(ಟ್ವಿಟರ್) ನಲ್ಲಿ ಮಾಹಿತಿ ನೀಡಿರುವ ಅವರು, ಮಂಗಳೂರಿಗೆ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ರೈಲು ಎಕ್ಸೆಪ್ರೆಸ್ ಬರಬೇಕು ಎಂಬುದು ಹಲವರ ಬೇಡಿಕೆಯಾಗಿದೆ. ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಇದೀಗ ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ ಎಂದಿದ್ದಾರೆ.

Also read: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಶಿವಮೊಗ್ಗದಿಂದ ವರ್ಗಾವಣೆ
ಇನ್ನು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.











Discussion about this post