ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಹೃದಯ ವಿದ್ರಾವಕ ಘಟನೆ ಕಟೀಲಿನಲ್ಲಿ ನಡೆದಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58)ಮೃತ ಕಲಾವಿದ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿದ್ದು ಈ ಸಂದರ್ಭ ಗುರುವಪ್ಪ ಬಾಯರು ಶಿಶುಪಾಲನ ಪಾತ್ರಧಾರಿಯಾಗಿ ಪಾತ್ರ ನಿರ್ವಹಿಸುತ್ತೊದ್ದರು. ಪ್ರಸಂಗದ ಕೊನೆ ಭಾ ಪ್ರದರ್ಶನಗೊಳ್ಳುತ್ತಿತ್ತು. ಇನ್ನೊಬ್ಬರು ಪಾತ್ರಧಾರಿ ಯಕ್ಷಗಾನದ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಿಂದ ಕೆಳಗಡೆ ಕುಸಿದು ಬಿದ್ದಿದ್ದರು.
ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ಕೊಡ್ಯೊಯ್ದರೂ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ. ಅಷ್ಟಮಂಗಲ ಪ್ರಸಂಗ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು ಸೇರ್ಪಡೆಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















