ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಂಗಳೂರು (Mangalore) ಸೇರಿದಂತೆ ಕರಾವಳಿ ಭಾಗದ ಜನರ ಗುಡ್ ನ್ಯೂಸ್ ಕೊಟ್ಟಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಬಹುಕಾಲದ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ, ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಕ್ಸ್ (X) ತಾಣದಲ್ಲಿ ವಿಡಿಯೋ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ನಮ್ಮ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.
Also read>> ಗಣೇಶೋತ್ಸವ ರಾಷ್ಟ್ರೀಯತೆ, ಸಾಮಾಜಿಕ ಏಕತೆಗೆ ಶಕ್ತಿ ನೀಡಿದ ಪರಂಪರೆ: ಸುರೇಶ್ ಋಗ್ವೇದಿ
Mangalore : ಸ್ಥಳೀಯ ಅಗತ್ಯಗಳಿಗೆ ಸ್ಥಳದಲ್ಲೇ ಪ್ರಮುಖ ನಿರ್ಧಾರ
ಕರಾವಳಿ ಭಾಗದ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಅರಿತುಕೊಂಡು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸ್ಥಳದಲ್ಲೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದು ವಿಶೇಷ ಸಚಿವ ಸಂಪುಟ ಸಭೆಯ ಉದ್ದೇಶವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಗಳೂರು ಸೇರಿದಂತೆ ಕರಾವಳಿ ಭಾಗದ ಅಭಿವೃದ್ಧಿಗೆ ಬಂದರು, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಕ್ಷೇತ್ರಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಸಂಬಂಧಿಸಿದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳು ಹಾಗೂ ಪ್ರಾದೇಶಿಕ ಅಗತ್ಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಇನ್ನು ತಮ್ಮ ವಿಡಿಯೋ ಸಂದೇಶದ ಕೊನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಳು ಭಾಷೆಯಲ್ಲಿ ಮಾತೆರೆಗ್ಲ ಸೊಲ್ಮೆಲು (ಎಲ್ಲರಿಗೂ ವಂದನೆಗಳು) ಎಂದು ಹೇಳುವ ಮೂಲಕ ಕರಾವಳಿ ಜನತೆಗೆ ಆತ್ಮೀಯ ಸಂದೇಶ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







