ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರು – ತಾಳಗುಪ್ಪ ನಡುವಿನ ರಾತ್ರಿ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಮೂರೇ ದಿನದಲ್ಲಿ ಬೇಧಿಸಿರುವ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಧರ್ಮನಾಯ್ಕ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿ ಬಿದ್ದಿದ್ದಾನೆ.
ಡಿ.23ರಂದು ರೈಲಿನಲ್ಲಿ ಮಾಂಗಲ್ಯ ಸರ ಕಳ್ಳತನ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಮತ್ತಷ್ಟು ಮುಂಜಾಗ್ರತೆ ವಹಿಸಿದ್ದರು.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಆನಂದಪುರ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ವಿಚಾರಣೆ ತೀವ್ರಗೊಳಿಸಿದಾಗ ಮಾಂಗಲ್ಯ ಸರ ಕಳ್ಳತನ ಮಾಡಿದ್ದನ್ನು ಬಾಯಿಬಿಟ್ಟಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ 72 ಗಂಟೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿದ ಆರ್’ಪಿ ಎಫ್ ಇನ್’ಸ್ಪೆಕ್ಟರ್ ಬಿ.ಕೆ. ಪ್ರಕಾಶ್ ಮತ್ತು ತಂಡಕ್ಕೆ ಐಜಿ ಗೌರವಿಸಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post