ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಣಿಪಾಲ್ ಆರೋಗ್ಯ ಕಾರ್ಡ್ 2020ರ ಅಭಿಯಾನ ನಡೆಯುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬಹುದಾಗಿದೆ.
ಈ ಕುರಿತಂತೆ ಮಾತನಾಡಿರುವ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಅವರು, ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ ಎಂದರು.
ನಮ್ಮ ಸಂಸ್ಥೆಯ ಸಂಸ್ಥಾಪಕ, ದಿ. ಡಾ. ಟಿ ಎಂ ಎ ಪೈಯವರ ಕನಸನ್ನು ಈಡೇರಿಸಲು, ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮಣಿಪಾಲ ಆರೋಗ್ಯಕಾರ್ಡನ್ನು 2000ನೇ ಇಸವಿಯಲ್ಲಿ ಪ್ರಾರಂಭಿಸಲಾಯಿತು. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. 20ನೇ ವರ್ಷದ ಅಂಗವಾಗಿ, ನಾವು ಕಾರ್ಡ್ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಪರಿಚಯಿಸಿದ್ಧೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟಗಳಲ್ಲಿ ಇಟ್ಟುಕೊಳ್ಳಬಹುದು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು 20ನೇ ವರ್ಷದ ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ಹೇಳಿದ್ದಾರೆ.
ಮಣಿಪಾಲ ಆರೋಗ್ಯ ಕಾರ್ಡ್ ನ್ನು ಉಪಯೋಗಿಸಿ, ಈ ಕೆಳಕಂಡ ಸೌಲಭ್ಯಗಳನ್ನು ಪಡೆಯಬಹುದು:
- ವೈದ್ಯರ ಸಮಾಲೋಚನೆ 50% ರಿಯಾಯಿತಿ
- ಪ್ರಯೋಗಾಲಯ ಪರೀಕ್ಷೆ 30% ರಿಯಾಯಿತಿ
- ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ 25% ರಿಯಾಯಿತಿ
- ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್, 20% ರಿಯಾಯಿತಿ
- ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ 20% ರಿಯಾಯಿತಿ
- ಔಷಧಾಲಯಗಳಲ್ಲಿ 12%ರವರೆಗೆ ರಿಯಾಯಿತಿ
- ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.
- ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಶ್ರೀನಿವಾಸ ಭಾಗವತ್ ಅವರನ್ನು 8105282145 ಸಂಪರ್ಕಿಸಬಹುದಾಗಿದೆ.
- 2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಭದ್ರಾವತಿ: ವಿಪ್ರ ಸೌಹಾರ್ಧ: 9739080599/ 9972720461, ಎಂ ಜಿ ಸುರೇಶ್: 9845681363, ಡಿ ಶಬರಿವಾಸನ್: 9035616188, ವೆಂಕಟ ಸುಬ್ರಾಯುಡು: 7848833568, ವೆಂಕಟೇಶ್ ಎ ಜಿ: 8971141292.
ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127
Get In Touch With Us info@kalpa.news Whatsapp: 9481252093
Discussion about this post