ಕಲ್ಪ ಮೀಡಿಯಾ ಹೌಸ್ | ಮಣಿಪಾಲ (ಉಡುಪಿ) |
ಮಣಿಪಾಲದ (Manipal) ಕೆಎಂಸಿ ಆಸ್ಪತ್ರೆಯಲ್ಲಿ (KMC Hospital) ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಘಟನೆಯಿಂದ ಆಸ್ಪತ್ರೆ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಗಾಯಗೊಂಡ ವ್ಯಕ್ತಿಯನ್ನು ತೀರ್ಥಹಳ್ಳಿ ನಿವಾಸಿ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.
Manipal : ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ
ಮಾಹಿತಿಯ ಪ್ರಕಾರ, ರಾಜೇಶ್ ಆರ್. ಶೆಟ್ಟಿ ಅವರು ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿದ್ದ ಕಿಟಕಿಯ ಮೂಲಕ ಹೊರಬರಲು ಯತ್ನಿಸಿದ ಸಂದರ್ಭದಲ್ಲಿ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಅವರನ್ನು ರಕ್ಷಿಸಿ ಅಗತ್ಯ ಚಿಕಿತ್ಸೆ ನೀಡಿದ್ದು, ಸದ್ಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
Also Read>> Flydubai ವಿಮಾನದಲ್ಲಿ ದಾಳಿ: ಗಾಯಗೊಂಡರೂ 170ಕ್ಕೂ ಹೆಚ್ಚು ಜೀವ ಉಳಿಸಿದ ಭಾರತೀಯ ಕ್ಯಾಪ್ಟನ್ ಸ್ಮಿತ್
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್
ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಡಿಯೊದಲ್ಲಿ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮೇಲಿನ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯಗಳು ಕಂಡುಬರುತ್ತಿವೆ ಎಂದು ಹೇಳಲಾಗಿದೆ.
ಘಟನೆಯ ನಿಖರ ಕಾರಣ, ವ್ಯಕ್ತಿ ಕಿಟಕಿಯಿಂದ ಹೊರಬರಲು ಯತ್ನಿಸಿದ ಸಂದರ್ಭ ಹಾಗೂ ಆ ವೇಳೆ ಆಸ್ಪತ್ರೆಯ ಭದ್ರತಾ ವ್ಯವಸ್ಥೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನೆ ಸಂಬಂಧ ಆಸ್ಪತ್ರೆ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












