ನವದೆಹಲಿ: ಇಂದು ನಿಧನರಾದ ದೇಶದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ನಾಳೆ ನಡೆಯಲಿದ್ದು, ದೇಶದಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಕ್ಯಾನ್ಸರ್’ನಿಂದ ಬಳಲುತ್ತಿದ್ದ ಪರಿಕ್ಕರ್ ಇಂದು ಸಂಜೆ ಕೊನೆಯುಸಿರೆಳೆದಿದ್ದು, ನಾಳೆ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಗೋವಾಗೆ ತೆರಳುವ ಸಾಧ್ಯತೆಯಿದೆ.
ಇನ್ನು, ನಾಳೆ ದೇಶದಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ದೇಶದ ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸುವಂತೆ ಆದೇಶಿಸಲಾಗಿದೆ.
ಇದರ ಬೆನ್ನಲ್ಲೇ, ನಾಳೆ ಮುಂಜಾನೆ 10 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
Discussion about this post