ಕಲ್ಪ ಮೀಡಿಯಾ ಹೌಸ್ | ಮಂತ್ರಾಲಯ |
ಹೊಸಪೇಟೆಯ ಟಿಬಿ ಅಣೆಕಟ್ಟೆಯಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಹರಿಸಿದ್ದು, ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜೆ ಸಲ್ಲಿಸಿದರು.
ತುಂಗಾ ಹಾಗೂ ಭದ್ರಾ ನದಿಗಳ ಪಾತ್ರದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಹೊಸಪೇಟೆಯಲ್ಲಿರುವ ಟಿಬಿ ಡ್ಯಾಂ ತುಂಬಿದ್ದು, ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ಹೀಗಾಗಿ, ತುಂಗಭದ್ರಾ ನದಿ ತುಂಬಿ ಹರಿಯುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post