ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭಾರತ ಮಾತ್ರವಲ್ಲ ಇಡಿಯ ವಿಶ್ವದ ಚಿತ್ರರಂಗ ಕಂಡ ಸ್ವರ ಸಾಮ್ರಾಟ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆಗೆ ಅವರೇ ಸಾಟಿ.
ಇಡಿಯ ವಿಶ್ವದಲ್ಲಿ 16ಕ್ಕೂ ಅಧಿಕ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ ಏಕೈಕ ಸರದಾರ ಎಂದರೆ ಅದು ಎಸ್’ಪಿಬಿ ಮಾತ್ರ.
ಹಿನ್ನೆಲೆ ಗಾಯನ ಮಾತ್ರವಲ್ಲ, ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಮಾತುಗಾರರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು.
ಬಾಲು ಅವರ ಸಾಧನೆಗೆ ಅವರನ್ನು ಅರಸಿ ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು, 25 ಬಾರಿ ಆಂಧ್ರಪ್ರದೇಶ ಸರ್ಕಾರದ ’ನಂದಿ’ ಪ್ರಶಸ್ತಿ ಸಂದಿದೆ. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಇವರಾಗಿದ್ದು, ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಸಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post