ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಫೆ.28ರಂದು ನಡೆಯಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಮ್ಮೊಲುಮೆಯ ಭಾವಾಭಿಮಾನ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಪಾಲ್ಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಮೇಲೆ ಶಿವಮೊಗ್ಗದ ಸಾಕಷ್ಟು ಅಭಿವೃದ್ಧಿಯಾಗಿದೆ. ಪಕ್ಷ-ಜಾತಿಗೆ ಸೀಮಿತವಾಗದೆ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುತ್ತಿದ್ದು, ಸರಕಾರಿ ನೌಕರರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದ್ದಾರೆ. ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳು ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ, ಕಾರ್ಯಕ್ರಮದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಕಸಾಪ, ಜಿಲ್ಲಾ ಕೈಗಾರಿಕಾ ಸಂಘಗಳು ಪಾಲ್ಗೊಳ್ಳಲಿವೆ ಎಂದರು.
ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಾಸುದೇವ್ ಮಾತನಾಡಿ, ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದಾಗ ತಮ್ಮ ಮನೆಗೆ ಕರೆದುಕೊಂಡು ಹೋಗಿ ಕೈಗಾರಿಕೆ ಸಂಘದ ಸಮಸ್ಯೆಗಳ ಪಟ್ಟಿ ಮಾಡಿಕೊಡುವಂತೆ ಎಲ್ಲಾ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ತಮ್ಮ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿದ್ದರು ಎಂದರು. ಎಲ್ಲರೂ ಒಟ್ಟಾಗಿ ಸೇರಿಕೊಂಡು ನಮ್ಮೊಲುಮೆ ಕಾರ್ಯಕ್ರಮ ಯಶಸ್ವಿ ಮಾಡಲಿದ್ದೇವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಕರಪ್ಪ, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗ್ಡೆ, ಬಸ್ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post