ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಕೊರೋನಾ Corona ರೂಪಾಂತರಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗಾಗಲೇ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಆದರೆ 60ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ Mask ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ MinisterDineshGundurao ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಲಾಗಿದೆ. ಯಾವ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೇಂದ್ರ ಸರ್ಕಾರದ ಜೊತೆಗೂ ಚರ್ಚಿಸಿ ಕೆಲವು ಸಲಹೆ, ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು, ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.
ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗ ಹಾಗೂ ಕೇರಳದಿಂದ ಬರುವವರ ಮೇಲೆ ಹೆಚ್ಚು ನಿಗಾ ಇಡುವಂತೆ ಸೂಚಿಸಲಾಗಿದೆ. ಉಸಿರಾಟದ ತೊಂದರೆ, ಇತರ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತದೆ. ಇದರಿಂದ ಕೊರೋನಾ ತೀವ್ರತೆ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಗಡಿ ಭಾಗದಲ್ಲಿ ಮತ್ತು ಸಂಶಯಾಸ್ಪಾದ ವ್ಯಕ್ತಗಳಿಗೆ ಕೊರೋನಾ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.
Also read: ಡಿ.20: ತಾಯಿ ಎದೆಹಾಲು ಬ್ಯಾಂಕ್ “ಅಮೃತ ಬಿಂದು”ಉದ್ಘಾಟನೆ | ಇದರ ಪ್ರಯೋಜನವೇನು?
ಇನ್ನೂ 2-3 ದಿನಗಳಲ್ಲಿ ಕೊರೋನಾ ತೀವ್ರತೆ ಬಗ್ಗೆ ಗೊತ್ತಾಗಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಸಹಜ ಸ್ಥಿತಿಯಲ್ಲಿದ್ದು, ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಮಾತ್ರ ನಿಷೇಧಾಜ್ಞೆ ಜಾರಿ ಬಗ್ಗೆ ಯೋಚಿಸಲಾಗುವುದು, ಪ್ರಸ್ತುತ ಅಂತಹ ಪರಿಸ್ಥಿತಿ ಇಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post