ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 457 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಗಿಂತಲೂ ಇಂದು ಭಾರೀ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2399 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2502 ನೆಗೆಟಿವ್ ಹಾಗೂ 457 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 296 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು ಐವರು ಮಂದಿ ಸಾವಿಗೀಡಾಗಿದ್ದಾರೆ. ಶಿವಮೊಗ್ಗ ತಾಲೂಕಿನವರು ಇಬ್ಬರು, ಸೊರಬ 1, ತೀರ್ಥಹಳ್ಳಿ 1 ಹಾಗೂ ಚಿಕ್ಕಮಗಳೂರು ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.
ಇಂದು 295 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 12 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 268 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 1545 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ಇನ್ನು, ಇಂದು 40 ವಿದ್ಯಾರ್ಥಿಗಳ ಸ್ಯಾಂಪಲ್ ಸಂಗ್ರಹಿಸಿದ್ದು, 17 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ಅದರಲ್ಲೂ ಪ್ರಮುಖವಾಗಿ ಶಿವಮೊಗ್ಗ ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಘೋಷಣೆ ಮಾಡಿದ್ದರೂ, ಪೊಲೀಸರು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದರೂ ಜನರು ಅನಾವಶ್ಯಕವಾಗಿ ತಿರುಗಾಡುತ್ತಿರುವುದು ಆತಂಕಕಾರಿಯಾಗಿದೆ. ಪ್ರಮುಖವಾಗಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಜನರು ಸೇರುತ್ತಿರುವುದು ಸೋಂಕು ಹರಡುವುದಕ್ಕೆ ಮುಖ್ಯ ಕಾರಣವಾಗುತ್ತಿದೆ. ಸಾರ್ವಜನಿಕರೇ ಇನ್ನಾದರೂ ಎಚ್ಚೆತ್ತುಕೊಳ್ಳಿ. ಜಿಲ್ಲಾಡಳಿತ, ಪಾಲಿಕೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ. ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬರಬೇಡಿ…
ತಾಲೂಕುವಾರು ವಿವರ:
ಶಿವಮೊಗ್ಗ: 240
ಭದ್ರಾವತಿ: 39
ಶಿಕಾರಿಪುರ: 56
ತೀರ್ಥಹಳ್ಳಿ: 30
ಸೊರಬ: 45
ಸಾಗರ: 14
ಹೊಸನಗರ: 12
ಇತರೆ ಜಿಲ್ಲೆ: 21
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















