ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿಯಲ್ಲಿ ಎರಡು ಕಾರುಗಳು ಸ್ಫೋಟಗೊಂಡಿದ್ದು, ಘಟನೆಯಲ್ಲಿ ಈವರೆಗೂ 8 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ದೇಶದಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಸ್ಪೋಟದ ಪರಿಣಾಮ ಹಲವು ದೇಹಗಳು ಛಿದ್ರ ಛಿದ್ರವಾಗಿದ್ದು, ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎನ್’ಜಿ ಸ್ಫೋಟಿಸಿರುವ ಶಂಕೆಯೂ ಕಂಡುಬAದಿದ್ದು, ಈಗಾಗಲೇ 7ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ದೆಹಲಿ ಪೊಲೀಸ್ ವಿಶೇಷ ಘಟಕ, ಬಾಂಬ್ ನಿಷ್ಕ್ರಿಯ ದಳಗಳೂ ಸ್ಥಳಕ್ಕೆ ತೆರಳಿದ್ದು ಸ್ಫೋಟಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿವೆ. ಈ ಬೆನ್ನಲ್ಲೇ ದೆಹಲಿ ಪೊಲೀಸರು ಇಡೀ ರಾಜ್ಯದಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.
ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ.
ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಭಯಾನಕ ಸ್ಫೋಟದ ತೀವ್ರತೆಗೆ ಮೃತ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳಕ್ಕೆ ಧಾವಿಸಿರುವ ಭದ್ರತಾ ಪಡೆಗಳು ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ವಿವಿಧೆಡೆ 2,900 ಕೆಜಿ ಸ್ಫೋಟಕ ವಸ್ತುಗಳನ್ನ ಪತ್ತೆಹಚ್ಚಿ ಜಪ್ತಿ ಮಾಡಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಗಂಟೆಗಳಲ್ಲಿ ಭೀಕರ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post