ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹೊರ ರಾಜ್ಯದಿಂದ ಬಂದವನ್ನು ಬಾಪೂಜಿ ನಗರದ ಕೃಷ್ಣಪ್ಪ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಮಹಾರಾಷ್ಟ್ರದಿಂದ ಬಂದ 12 ಮಂದಿಯನ್ನು ಕೃಷ್ಣಪ್ಪ ಹಾಸ್ಟೆಲ್’ನಲ್ಲಿರಿಸಲು ಮುಂದಾಗಲಾಗಿತ್ತು. ಆದರೆ, ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಇನ್ನು, ಸ್ಥಳಕ್ಕೆ ಆಗಮಿಸಿದ ಉಪಮೇಯರ್ ಸುರೇಖಾ ಮುರಳೀಧರ್, ಈ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಕ್ವಾರಂಟೈನ್’ಗಾಗಿ ಬಾಪೂಜಿ ನಗರದಲ್ಲಿ ಮೂರು ಕಟ್ಟಡಗಳನ್ನು ಬಳಸಿಕೊಳ್ಳಲಾಗಿದೆ. ಆದರೆ, ಈಗ ಮತ್ತೆ ಕ್ವಾರಂಟೈನ್ ಮಾಡುವ ಮುನ್ನ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದರು.
ಮುಂಜಾಗ್ರತಾ ಕ್ರಮವಾಗಿ ಇಡಿಯ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post