ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿದೆ.
ಏನೆಲ್ಲಾ ನಿರ್ಧಾರ ಕೈಗೊಳ್ಳಲಾಗಿದೆ?
- ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು
- ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದಿಗೆ ನಿರ್ಧಾರ
- ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು
- ಪಾಕ್ ಪ್ರಜೆಗಳಿಗೆ ವೀಸಾ ಕೊಡದಿರಲು ನಿರ್ಧಾರ
- ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು
- ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚುವ ಪ್ರಮುಖ ನಿರ್ಧಾರ

ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ನಾಯಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post