ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮೇ 19-20ರವರೆಗೂ ಬೆಂಗಳೂರು #Bengaluru ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ #OrangeAlert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ #IMDKarnataka ಮಾಹಿತಿ ಪ್ರಕಟಿಸಿದ್ದು, ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರಿ ಮಳೆ #HeavyRain ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Also read: ಬಿರಿಯಾನಿ ಪ್ರಿಯರೇ ಎಚ್ಚರ | ವ್ಯಕ್ತಿಯ ಅನ್ನನಾಳದಲ್ಲಿ ಸಿಲುಕಿತ್ತು 3.5 ಸೆಮೀ ಉದ್ದದ ಮಟನ್ ಮೂಳೆ
ಇನ್ನು, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗಾಳಿ ಬೀಸಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post