ಮೈಸೂರು: ಮೇ 22 ರಿಂದ 26ರವರೆಗೂ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ರಾಜ್ಯ ಮಟ್ಟದ ಯುವ ಬ್ರಾಹ್ಮಣರ ‘ಶಂಕರ ಕಪ್’ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯಲ್ಲಿ ಆಯೋಜನೆ ಮಾಡಲಾಗಿದೆ.
ಮೈಸೂರು ರೈಲ್ವೆ ನಿಲ್ದಾಣದ ಎದುರು ಇರುವ ಜೆಕೆ ಮೈದಾನದಲ್ಲಿ ಶಂಕರ ಕಪ್ ಪಂದ್ಯಾವಳಿ ನಡೆಯಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯ ಬ್ರಾಹ್ಮಣ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶವಿದ್ದು ಮೇ 13 ರೊಳಗೆ ತಮ್ಮ ತಂಡದ ಹೆಸರನ್ನು ನೋಂದಾಯಿಸಬೇಕಿದೆ.
ತಂಡದ ಪ್ರವೇಶ ಶುಲ್ಕ ರೂ. 3000, ಹೊರಜಿಲ್ಲೆಯ ತಂಡದ ಅನುಕೂಲಕ್ಕಾಗಿ ಉಚಿತ ವಸತಿ ವ್ಯವಸ್ಥೆ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಮತ್ತು ಮೈಸೂರಿನ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಅನೂಕೂಲ ಮಾಡಿಕೊಡಲಾಗಿದೆ.
ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಾಗಿದ್ದು ಆಟಗಾರರಿಗೆ ವಯಸ್ಸಿನ ವಯೋಮಿತಿ ಇರುವುದಿಲ್ಲ. ತೀರ್ಪುಗಾರರ ತೀರ್ಮಾನ ಅಂತಿಮವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ: 7829067769, 9880752727, 9972606425 ಗೆ ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣ ಯುವ ವೇದಿಕೆ ಕೋರಿದೆ.
















