ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಅವರ ಸಾರ್ವಜನಿಕ ಜೀವನದ 50 ಸಾರ್ಥಕ ವರ್ಷಗಳ ಸಂಭ್ರಮದ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ #Chitradurga ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅದ್ದೂರಿ ಸಿದ್ದತೆ ನಡೆದಿದೆ.
ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಸಂಸದ ಬಿ.ವೈ. ರಾಘವೇಂದ್ರ #BYRaghavendra ಮಾತನಾಡಿದರು.
Also Read>> ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ
50 ವರ್ಷಗಳ ಕಾಲ ಜನಪರ ಹೋರಾಟ, ಅಭಿವೃದ್ಧಿ ಪಥಕ್ಕೆ ಗೌರವ ಸಲ್ಲಿಸುವ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ. ಯಡಿಯೂರಪ್ಪ ಅವರ ಈ ಸಾಧನೆಯನ್ನು ಸ್ಮರಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಲಿದ್ದು, ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ನಮ್ಮ ಜಿಲ್ಲೆಯ ಹೆಮ್ಮೆಯ ನಾಯಕರ ಈ ಮಹತ್ವದ ಮೈಲಿಗಲ್ಲನ್ನು ಸಂಭ್ರಮಿಸಲು ಮತ್ತು ಚಿತ್ರದುರ್ಗದಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
Also Read>> ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?
ಬಿಎಸ್’ವೈ ಅವರ ಐದು ದಶಕಗಳ ಜನಪರ ಹೋರಾಟ ಮತ್ತು ಅಭಿವೃದ್ಧಿ ಪಥಕ್ಕೆ ಗೌರವ ಸಲ್ಲಿಸುವ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕಾರ್ಯಕ್ರಮಕ್ಕಾಗಿ 100 ಎಕರೆ ಪ್ರದೇಶದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸುಮಾರು 200 ಅಡಿಗಳಷ್ಟು ಅಗಲದ ಬೃಹತ್ ವೇದಿಕೆ ಸಿದ್ದವಾಗುತ್ತಿದೆ.
ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಜಿಲ್ಲೆಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.
Also Read>> ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ
ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಮಾಜಿ ಶಾಸಕರಾದ ಅಶೋಕ್ ನಾಯ್ಕ, ಜ್ಯೋತಿಪ್ರಕಾಶ್, ಪ್ರಮುಖರಾದ ನಟರಾಜ್ ಭಾಗವತ್, ಸತೀಶ್ ಕುಮಾರ್ ಶೆಟ್ಟಿ, ರಮೇಶ್, ವಿ. ರಾಜು, ಮಧುಕರ ಶೆಟ್ಟಿ, ಅಶ್ವತ್ಥ್ ನಾರಾಯಣ ಶೆಟ್ಟಿ, ಉಂಬ್ಳೆಬೈಲು ಮೋಹನ್, ದತ್ತಣ್ಣ, ಭಾಸ್ಕರ್ ಕಾಮತ್, ಪೆರುಮಾಳ್ , ಶಾಂತ ಸುರೇಂದ್ರ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಸಮುದಾಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















