ಕಲ್ಪ ಮೀಡಿಯಾ ಹೌಸ್
ಎಮ್‌ಸಿ ಹಳ್ಳಿ/ತರೀಕೆರೆ: ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದೇವೆ ಎಂದು ವಾಯ್ಸ್ ಮೆಸೇಜ್ ಕಳಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದವರನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮದವರು ಎಂದು ಗುರುತಿಸಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಮೂಲದ ನೀತು ಅವರನ್ನು ಬೆಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ದಂಪತಿಗೆ 13 ವರ್ಷದ ಧ್ಯಾನ್ ಎಂಬ ಮಗನಿದ್ದಾನೆ.
ಘಟನೆ ಹಿನ್ನೆಲೆ:
ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಸ್ವಿಫ್ಟ್ ಕಾರಿನಲ್ಲಿ ಬಂದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ, ನಾಲ್ವರು ಎಂ.ಸಿ. ಹಳ್ಳಿ ಬಳಿ ಭದ್ರಾ ನಾಲೆಗೆ ಕಾರಿನ ಸಮೇತ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


35 ವರ್ಷದ ನೀತು ಹಾಗೂ ಅವರ ಮಗ ಧ್ಯಾನ್ ಸಾವಿನಿಂದ ಪಾರಾಗಿದ್ದಾರೆ. ಆದರೆ, ಮಂಜು ಮತ್ತು ಅವರ ತಾಯಿ ಸುನಂದಮ್ಮ ಪತ್ತೆಯಾಗಿಲ್ಲ. ವೇಗವಾಗಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಎಸ್‌ಪಿ ಅಕ್ಷಯ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಾಪತ್ತೆ ಆದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















