ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಕಾರ್ಖಾನೆ ಉಳಿಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಸಚಿವರನ್ನು ಭೇಟಿಯಾದ ಸಮಿತಿ ಸದಸ್ಯರು ಲಕ್ಷಾಂತರ ಮಂದಿಗೆ ಜೀವನ, ಅನ್ನ ನೀಡಿರುವ ಕಾರ್ಖಾನೆ ಉಳಿಯಬೇಕಿದೆ. ಹೀಗಾಗಿ, ವಿಐಎಸ್’ಎಲ್ ಕಾರ್ಖಾನೆ ಖಾಸಗೀಕರಣ ಪ್ರಕ್ರಿಯೆಯಿಂದ ಉಳಿಸಿಕೊಡಲು ಸಹಕಾರ ನೀಡಿ ಎಂದು ಕೋರಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಚವರು, ಕಾರ್ಖಾನೆಯನ್ನು ಉಳಿಸಬೇಕು ಎಂಬುದು ಸರ್ಕಾರ ಚಿಂತನೆಯಾಗಿದೆ. ಈ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಅವರೊಂದಿಗೆ ಸಮಿತಿ ಪ್ರಮುಖರು ಕುಳಿತು ಮಾತನಾಡಿ, ಎಲ್ಲವನ್ನೂ ಪರಿಹಾರ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







