No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2025
in ರಾಷ್ಟ್ರೀಯ
0
ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರ್ಕಾರ ತನ್ನ ಎಲ್ಲಾ ಮಹಿಳಾ ನೌಕರರಿಗೂ ಅನ್ವಯವಾಗುವಂತೆ ಋತುಚಕ್ರದ ಸಂದರ್ಭದಲ್ಲಿ ಒಂದು ದಿನ ರಜೆ ನೀಡುವ ಕುರಿತಾಗಿ ಅಧಿಕೃತ ಆದೇಶ ಹೊರಬಿದ್ದಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ವಾರ್ಷಿಕ 12 ಋತುಚಕ್ರದ ರಜೆಗಳನ್ನು ನೀಡಲು ನಿರ್ಧರಿಸಿದೆ.

ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಲಾಗುತ್ತದೆ.

ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಿಗೆ ಇದು ಅನ್ವಯಿಸುತ್ತದೆ.

ಈ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡುವುದು ಉದ್ದೇಶವಾಗಿದೆ.
ಇದಕ್ಕಾಗಿ ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು, ತಜ್ಞವೈದ್ಯರು, ಕಾರ್ಮಿಕ ವರ್ಗಗಳ ಪ್ರತಿನಿಧಿಗಳು, ಕೈಗಾರಿಕಾ ಸಂಘದ ಪ್ರತಿನಿಧಿಗಳು, ಐಟಿ/ಬಿಟಿ ಪ್ರತಿನಿಧಿ, ಗಾರ್ಮೆಂಟ್ಸ್ ಮಾಲೀಕರ ಪ್ರತಿನಿಧಿ, ಪ್ರಾಧ್ಯಾಪಕರು, ಸಮಾಜ ಸೇವಕರು, ಮಾಲೀಕ ವರ್ಗದ ಪ್ರತಿನಿಧಿಗಳು, ಇತರೆ ಸದಸ್ಯರುಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು.

ಕಾರ್ಮಿಕರು, ಕಾರ್ಮಿಕ ಸಂಘಗಳು, ಮಾಲೀಕರು, ಮಾಲೀಕ ಸಂಘಗಳು, ಮಹಿಳಾ ಸಂಘಟನೆಗಳು, ಸಾರ್ವಜನಿಕರು, ಸರ್ಕಾರಿ ನೌಕರರ ಒಕ್ಕೂಟ ಮೊದಲಾದವರಿಂದ ಪುಸ್ತಾಪಿತ ಋತುಚಕ್ರ ರಜಾನೀತಿಯ ಸಂಬಂಧ ಒಟ್ಟು 75 ಅಭಿಪ್ರಾಯಗಳು ಸ್ವೀಕೃತವಾಗಿದ್ದು, ಈ ಪೈಕಿ 56 ಅಭಿಪ್ರಾಯಗಳು ಪುಸ್ತಾಪಿತ ಋತುಚಕ್ರ ರಜಾನೀತಿಯ ಪರವಾಗಿರುದ್ದವು. ಉಳಿದಂತೆ 19 ಅಭಿಪ್ರಾಯಗಳು ವಿರುದ್ಧವಾಗಿದ್ದವು. ಉದ್ದೇಶಿತ ರಜಾನೀತಿಯನ್ನು ಬೆಂಬಲಿಸಿ ಸ್ವೀಕೃತವಾದ 56 ಅಭಿಪ್ರಾಯಗಳಲ್ಲಿ, 26 ಅಭಿಪ್ರಾಯಗಳು ಮಾಲೀಕ ವರ್ಗದವರು, 7 ಕಾರ್ಮಿಕ ಸಂಘಗಳು, 19 ನೌಕರರು, 1 ಸಾರ್ವಜನಿಕರು, 1 ಸರ್ಕಾರಿ ನೌಕರರ ಒಕ್ಕೂಟ, 2 ಮಹಿಳಾ ಸಂಘಗಳು ನೀಡಿದ್ದಾರೆ.

ಅಲ್ಲದೇ ಪಸ್ತಾಪಿತ ಋತುಚಕ್ರ ರಜಾನೀತಿಯನ್ನು ಬೆಂಬಲಿಸಿರುವ ಕಾರ್ಮಿಕ/ಕಾರ್ಮಿಕ ಸಂಘಟನೆ/ಮಹಿಳಾ ಸಂಘಟನೆ/ಆಡಳಿತ ವರ್ಗದವರ 56 ಅಭಿಪ್ರಾಯಗಳಲ್ಲಿ 10 (10 ಅಭಿಪ್ರಾಯಗಳಲ್ಲಿ 4 ಆಡಳಿತ ವರ್ಗದ ಅಭಿಪ್ರಾಯಗಳು) ಅಭಿಪ್ರಾಯಗಳು ಪ್ರಸ್ತಾಪಿಸಿರುವ ವಾರ್ಷಿಕ 6 ರಜೆಗಳಿಗೆ ಬದಲಾಗಿ 12 ರಜೆಗಳನ್ನು ನೀಡುವಂತೆ ಕೋರಲಾಗಿತ್ತು.

ಋತುಚಕ್ರದ ವೇಳೆ ಯಾವ ಕಾರಣಕ್ಕಾಗಿ ರಜೆ?

  • ವಿವಿಧ ಉದ್ದಿಮೆಗಳಲ್ಲಿ ದುಡಿಯುವ ಮಹಿಳಾ ನೌಕರರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಉತ್ತೇಜನ
  • ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ
  • ಉತ್ಪಾದನಾ ಚಟುವಟಿಕೆಗಳಲ್ಲಿ ಮಹಿಳಾ ನೌಕರರ ಭಾಗಿ ಹೆಚ್ಚಿ ದೇಶದ ಉತ್ಪಾದನೆ ಹೆಚ್ಚಳ
  • ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ
  • ಋತುಚಕ್ರದ ರಜಾನೀತಿಯಿಂದ ಉತ್ತಮ ಜಾಗತಿಕ ಅಭ್ಯಾಸ

ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?
ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್’ಸಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತುಚಕ್ರ ರಜೆ ನೀತಿ ಅನ್ವಯಾಗುತ್ತದೆ.

ಯಾವ ವಯೋಮಾನದ ಮಹಿಳೆಯರಿಗೆ?
ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿರ್ಗಾ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅನ್ವಯವಾಗುತ್ತದೆ.

ಎರಡು ಪ್ರಮುಖ ಷರತ್ತುಗಳು:
1. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆ ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆ ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (ಕ್ಯಾರಿ ಓವರ್) ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLabor organizationLatest News KannadaMenstrual cycleMenstrual leaveWorld Labour Dayಋತುಚಕ್ರಋತುಚಕ್ರದ ರಜೆಕಾರ್ಮಿಕ ಇಲಾಖೆಕಾರ್ಮಿಕ ಸಂಘಟನೆತೋಟ ಕಾರ್ಮಿಕರ ಕಾಯ್ದೆಬೆಂಗಳೂರುಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆರಾಜ್ಯ ಸರ್ಕಾರ
Share200Tweet125Send
Previous Post

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

Next Post

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL