ನವದೆಹಲಿ: #MeToo ಅಭಿಯಾನದಲ್ಲಿ ತಮ್ಮ ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಕ್ಬರ್ ಕೊನೆಗೂ ರಾಜೀನಾಮೆ ನೀಡಿದ್ದಾರೆ.
ಸಚಿವರ ವಿರುದ್ಧ ಆರೋಪ ಕೇಳಿಬಂದಾಗಿನಿಂದಲೂ ರಾಜೀನಾಮೆಗೆ ಪಟ್ಟು ಹಿಡಿಯಲಾಗಿತ್ತು. ಆದರೆ, ತಮ್ಮ ವಿರುದ್ಧದ ಆರೋಪವನ್ನು ಅವರು ನಿರಾಕರಿಸುತ್ತಲೇ ಬಂದಿದ್ದು, ತಮ್ಮ ವಿರುದ್ಧ ಆರೋಪ ಮಾಡಿದವರ ವಿರುದ್ದ ಮಾನನಷ್ಟ ಮೊಕದ್ದಮೆ ಸಹ ದಾಖಲಿಸಿದ್ದಾರೆ. ಆದರೆ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ಕಚೇರಿ ಸೂಚನೆ ಮೇರೆಗೆ ರಾಜೀನಾಮೆ ನೀಡಿರುವ ಅಕ್ಬರ್, ತಮಗೆ ಸಚಿವ ಸ್ಥಾನ ಸಿಗಲು ಅವಕಾಶ ಮಾಡಿಕೊಟ್ಟಿದ್ದ ಪ್ರಧಾನಿ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.
Discussion about this post