ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಉದ್ವಿಗ್ನತೆಯ ಪರಿಣಾಮ ಭಾರತದ ಹಲವು ರಾಜ್ಯಗಳಲ್ಲಿ ಹಿಂಸಾಚಾರದ ಸಂಭಾವ್ಯತೆಯಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಪತ್ರ ಬರೆದಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಮೂರು ದಿನಗಳ ಹಿಂದೆಯೇ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಕಳುಹಿಸಿದೆ ಎಂದು ತಿಳಿದುಬಂದಿದೆ.
ಮೂರು ದಿನಗಳ ಹಿಂದೆಯೇ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಕಳುಹಿಸಿದ ಕುರಿತಾಗಿ ವರದಿಯಾಗಿದ್ದು, ಇರಾನ್-ಅಮೆರಿಕಾ-ಇಸ್ರೇಲ್ ದಾಳಿ ಪ್ರತಿದಾಳಿಯಿಂದಾಗಿ ಅಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದೆ.
ಪ್ರಮುಖವಾಗಿ, ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆಯಿಂದಿರಬೇಕು ಎಂದಿದೆ.
ಅಶಾಂತಿಯನ್ನು ಪ್ರಚೋದಿಸುವ ಇರಾನ್ ಪರ ಮೂಲಭೂತ ಪ್ರಚಾರಕರನ್ನು ಪತ್ತೆ ಮಾಡಬೇಕು. ಅಶಾಂತಿ ಮತ್ತು ಉದ್ವಿಗ್ನತೆ ಉಂಟು ಮಾಡುವ ಇರಾನ್ ಪರವಾದ ಮೂಲಭೂತ ಪ್ರಚಾರಕರನ್ನು ಗುರುತಿಸಿ ಮೇಲ್ವಿಚಾರಣೆ ಮಾಡಬೇಕು ಎಂದು ಎಚ್ಚರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















