ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾವೇರಿ: ಮುಂಗಾರು ಬಿತ್ತನೆಗೆ ಸಿದ್ಧವಾಗಿರುವ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆಗೆ ತೊಂದರೆಯಾಗಬಾರದೆಂಬ ಮಹತ್ ಉದ್ದೇಶದಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ದಿಟ್ಟ ಕ್ರಮಕೈಗೊಂಡಿದ್ದಾರೆ.
ಈ ನಿಟ್ಟಿನಲ್ಲಿ ನಕಲಿ ಬೀಜ ಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲು ಖಡಕ್ ಆದೇಶ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ವಿಚಕ್ಷಣಾ ತಂಡ ಹಾಗೂ ಕೃಷಿ ಅಧಿಕಾರಿಗಳು ಸತತ ಬಿರುಸಿನ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಅದರನ್ವಯ ನಕಲಿ ಬಿಡಿ ಬೀಜಗಳನ್ನು ದಾಸ್ತಾನು ಮಾರಾಟ ಮಾಡಲು ಸಿದ್ಧವಾಗಿದ್ದ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ಮಾಡಿದ್ದು, ಸುಮಾರು ಆರು ಕೋಟಿ ರೂ. ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ.
ಹಾವೇರಿ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ಸಿಪಿಐ ಭಾಗ್ಯವತಿ ನೇತೃತ್ವದ ಜಂಟಿ ತಂಡಗಳ ನೇತೃತ್ವದಲ್ಲಿ ಗುರುವಾರ ರಾತ್ರಿ ಬ್ಯಾಡಗಿ ಪಟ್ಟಣದ ಸೂರ್ಯ ಕೋಲ್ಡ್ ಸ್ಟೋರೇಜ್ ಮೇಲೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಸಿಪಿಐ ಭಾಗ್ಯವತಿ, ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 2950ಕ್ವಿಂಟಾಲ್ ನಕಲಿ ಬಿಡಿಬೀಜಗಳನ್ನು ಹಾಗೂ ಛತ್ರ ಗ್ರಾಮದ ವಕ್ರತುಂಡ ಕೋಲ್ಡ್ ಸ್ಟೋರೆಜ್’ನಲ್ಲಿ ಇರಿಸಲಾಗಿದ್ದ ಸುಮಾರು 2800 ಕ್ವಿಂಟಾಲ್ ನಕಲಿ ಬಿಡಿಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.
Get in Touch With Us info@kalpa.news Whatsapp: 9481252093
Discussion about this post