ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಧರ್ಮೇಗೌಡರ ಅಕಾಲಿಕ ಮರಣ ಹೊಂದಿದ ಸುದ್ದಿ ತಿಳಿದು ಮನಸ್ಸಿಗೆ ಬಹಳ ಆಘಾತವಾಗಿದೆ. ಸರಳ ಹಾಗೂ ಸಜ್ಜನ ವ್ಯಕ್ತಿತ್ವದವರಾಗಿದ್ದ ಧರ್ಮೇಗೌಡರು ಎಲ್ಲರಿಗೂ ಸ್ನೇಹಿತರಾಗಿದ್ದರು. ಅವರ ಹಠಾತ್ ಮರಣದ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದ ಸದಸ್ಯರಿಗೆ ಹಾಗೂ ಅವರ ಅಪಾರ ಬಂಧು ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.









Discussion about this post