ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಖಂಡ ಹಿಂದೂಗಳ ಕನಸಾದ ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ನಿಧಿ ಸಮರ್ಪಣಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.
ರಾಮ ಜನ್ಮ ಭೂಮಿ ಹೋರಾಟ ಆರಂಭದ ವೇಳೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋವಿಂದ ಸ್ವಾಮಿ ಅವರ ನಿವಾಸದಲ್ಲಿ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಗುಲಾಮಗಿರಿಯ ಸಂಕೇತವಾಗಿದ್ದ ಬಾಬರಿ ಮಸೀದಿಯನ್ನು ಕೆಡವಿ 28 ವರ್ಷಗಳಾಗಿದ್ದು, ಸಮಸ್ತ ಹಿಂದೂಗಳ ಆರಾಧ್ಯ ದೈವ ಶ್ರೀ ರಾಮನ ಮಂದಿರ ನಿರ್ಮಾಣವಾಗುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದರು.
ಸಚಿವರ ಜೊತೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್, ಸಚಿವರ ಪತ್ನಿ ಜಯಲಕ್ಷ್ಮೀ, ಹಿಂದೂ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post