ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ಜಿಯಾಗುಡಾ ವಿಭಾಗದ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ರಾಜ್ಯದ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಪರವಾಗಿ ಮತಯಾಚನೆ ಮಾಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಅಪಾರ ಬೆಂಬಲ ಮುಂದವರೆದಿದ್ದು, ಇದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಸಹ ಸಾಬೀತಾಗಿದೆ. ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಅಭಿವೃದ್ಧಿ ಪರ್ವ ಸಾಗಿದೆ. ಹೀಗಾಗಿ, ಕಾರ್ಪೊರೇಶನ್ ಚುನಾವಣೆಯಲ್ಲೂ ಸಹ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಪಾದಯಾತ್ರೆಯಲ್ಲಿ ಪಾಲ್ಗೊಂಡ ಈಶ್ವರಪ್ಪನವರು ಮನೆಮನೆಗೆ ತೆರಳಿ ಪಕ್ಷದ ಪರವಾಗಿ ಮತಯಾಚನೆ ಮಾಡಿದರು. ಹಲವು ಕಡೆಗಳಲ್ಲಿ ಮಹಿಳೆಯರು ಸಚಿವರಿಗೆ ಆರತಿ ಬೆಳಗಿ ಬರಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post