No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ಮುಂಜಾಗ್ರತೆ: ಶಿವಮೊಗ್ಗ ಜಿಲ್ಲಾಡಳಿತವನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ

kalpa News by kalpa News
April 1, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾರಣಾಂತಿಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಪ್ರಶಂಸನೀಯವಾಗಿದ್ದು, ನಿಗಧಿಪಡಿಸಿದ ದಿನಾಂಕದವರೆಗೂ ಇದೇ ಕ್ರಮವನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಕೊರೋನ ನಿಯಂತ್ರಿಸುವಲ್ಲಿ ಕೈಗೊಂಡ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರಿಗೆ ದಿನಸಿ, ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕೆಲವು ಭಾಗದಲ್ಲಿ ಸಂದರ್ಭದ ದುರುಪಯೋಗಪಡಿಸಿಕೊಂಡು ಹಣ್ಣು-ತರಕಾರಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಅದರ ನಿಯಂತ್ರಣಕ್ಕಾಗಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹಾಪ್‌ಕಾಮ್ಸ್‌ ಮೂಲಕ ಮಾರಾಟಕ್ಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದ ಅವರು ಸ್ವಚ್ಚತೆ ಇಲ್ಲದಿರುವ ಹಾಗೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ತಳ್ಳುಗಾಡಿಗಳನ್ನು ನಿರ್ಬಂಧಿಸುವಂತೆ ಅವರು ಸೂಚಿಸಿದರು.

ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತಿ ಮಾಹೆ ವಿತರಿಸಲಾಗುತ್ತಿದ್ದ ಪಡಿತರವನ್ನು ಮುಂದಿನ 2 ತಿಂಗಳಿನ ಪಡಿತರವನ್ನು ಒಂದೆ ಬಾರಿಗೆ ನೀಡಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆ ನಾಳೆಯಿಂದ ಜಿಲ್ಲೆಯಾದ್ಯಂತ ಆರಂಭವಾಗಲಿದೆ. ಪಡಿತರ ಚೀಟಿದಾರರಿಗೆ ಯಾವುದೇ ಅಡಚಣೆ ಉಂಟಾಗದಂತೆ ಅರ್ಹ ಕುಟುಂಬಗಳಿಗೆ ಪಡಿತರ ವಿತರಣೆಯಾಗುವಂತೆ ನೋಡಿಕೊಳ್ಳಬೇಕು ಎಂದ ಅವರು, ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕೋಳಿ ಮತ್ತು ಕೋಳಿ ಮೊಟ್ಟೆ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ತಜ್ಞರ ತಂಡವನ್ನು ರಚಿಸಿದ್ದು, ನಾಳೆ ತಜ್ಞರ ತಂಡದ ವರದಿ ಬರಲಿದೆ. ಈ ವರದಿಯನ್ನಾಧರಿಸಿ, ಕೋಳಿ ಮತ್ತು ಮೊಟ್ಟೆ ಮಾರಾಟ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 400 ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಊಟ ನೀಡುವಂತೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಈಗಾಗಲೇ ತೆಗೆದುಕೊಂಡ ನಿರ್ಧಾರದಂತೆ ತ್ವರಿತವಾಗಿ ಊಟೋಪಹಾರ ನೀಡುವ ವ್ಯವಸ್ಥೆ ಆಗಬೇಕು. ಅಲ್ಲದೇ ಅವರ ಕುಟುಂಬದ ಅವಲಂಬಿತರಿಗೆ ದಿನಸಿ ಹಾಗೂ ಅಗತ್ಯ ವಸ್ತುಗಳ ಕಿಟ್‌ಗಳನ್ನು ವಿತರಿಸುವಂತೆ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕೊರೋನ ಸೋಂಕು ತಗುಲದಂತೆ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿಗಾಗಿ ಕರಪತ್ರ ವಿತರಿಸಲಾಗಿದೆ. ಅಲ್ಲದೆ ಸ್ಯಾನಿಟೈಜರ್, ಮಾಸ್ಕ್‌ ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ. ಇದರೊಂದಿಗೆ ಔಷಧ ಸಿಂಪರಣೆ ಮಾಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಸೋಂಕು ಹೆಚ್ಚಳವಾಗಬಹುದಾದ ಸಂದರ್ಭಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್ ವ್ಯವಸ್ಥೆಗಾಗಿ ಸುವ್ಯವಸ್ಥಿತವಾದ 2 ಹಾಸ್ಟೆಲ್‌ಗಳನ್ನು ಕಾಯ್ದಿರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದಿನದ 24 ಗಂಟೆಯೂ ಔಷಧ ಮಳಿಗೆಗಳನ್ನು ತೆರೆದು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಸೂಚಿಸಲಾಗಿದೆ. ಪ್ರತಿದಿನ ತಾಲೂಕು ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ದೇಶ-ವಿದೇಶಗಳಿಂದ ಬಂದಿರುವ ಹಾಗೂ ಇತ್ತೀಚೆಗೆ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಂದ ಆಗಮಿಸಿರುವವರಿಗೂ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕಂಡುಬರಬಹುದಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು.

ರೈಸ್’ಮಿಲ್‌ಗಳಲ್ಲಿ ಹಲ್ಲಿಂಗ್ ಮಾಡಲು ಅನುಮತಿ ನೀಡಲಾಗುವುದು. ರೈತರು ತಮ್ಮ ಹೊಲ-ಗದ್ದೆಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಾವುದೇ ಆಕ್ಷೇಪಣೆ ಇಲ್ಲ. ಆದರೆ, ಸುರಕ್ಷತಾ ಕ್ರಮಗಳನ್ನು ಅನುಸರಿಸಲೇಬೇಕು. ಅಲ್ಲದೇ ಕಟಾವಿಗೆ ಬಂದಿರುವ ಬೆಳೆಯ ಕಟಾವು ಕಾರ್ಯ ಕೈಗೊಳ್ಳಲು, ಕೊಳವೆಬಾವಿಗಳನ್ನು ಕೊರೆಸಿಕೊಳ್ಳಲು ಅನುಮತಿ ನೀಡಲಾಗುವುದು. ಕೆಲವು ಆಯ್ದ ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಜೂಜು ಮುಂತಾದ ಸಲ್ಲದ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಬಗ್ಗೆ ದೂರುಗಳಿದ್ದು, ಅವುಗಳ ನಿಯಂತ್ರಣಕ್ಕಾಗಿ ಪೊಲೀಸರ ಕಣ್ಗಾವಲು ಹಾಕಲಾಗುವುದು ಎಂದರು.

ಸಭೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕನಾಯ್ಕ್‌, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ. ಶಾಂತರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Corona VirusDC K B SivakumarKannadaNewsWebsiteLatestNewsKannadaMalnadNewsMinister K S EshwarappaShivamoggaShivamogga DCಆರೋಗ್ಯ ಇಲಾಖೆಕೆ.ಬಿ. ಶಿವಕುಮಾರ್ಕೊರೋನಾ ವೈರಸ್ಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಬಗ್ಗೆ ನಿಮಗೆ ಗೊತ್ತಿಲ್ಲದ ಅನೇಕ ಸಂಗತಿಗಳನ್ನು ನಿತ್ಯಾನಂದ ವಿವೇಕವಂಶಿ ಬರೆದಿದ್ದಾರೆ ಓದಿ…

Next Post

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-7 ಮಾರ್ಕಂಡೇಯ ಪುರಾಣ

kalpa News

kalpa News

Next Post
18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-7 ಮಾರ್ಕಂಡೇಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-7 ಮಾರ್ಕಂಡೇಯ ಪುರಾಣ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL