ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆ #ParliamentElection2024 ದಿನಾಂಕ ಘೋಷಣೆಗೆ ಕೆಲವೇ ದಿನಗಳ ಬಾಕಿಯಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ #WestBengal ವಿಶೇಷವಾದ ಭದ್ರತೆ ಕಲ್ಪಿಸಲು ಕೇಂದ್ರ ಗೃಹ ಇಲಾಖೆ ನಿರ್ಧರಿಸಿದೆ.
ಈ ಕುರಿತಂತೆ ಕೇಂದ್ರ ಗೃಹ ಇಲಾಖೆ ನಿರ್ಧಾರ ಕೈಗೊಂಡಿದೆ ಎಂಬ ಮಾಹಿತಿ ದೊರೆತಿದ್ದು, ಪಶ್ಚಿಮ ಬಂಗಾಳದಲ್ಲಿ ವಿಶೇಷವಾಗಿ ಲೋಕಸಭಾ ಚುನಾವಣೆಯ ದೃಷ್ಠಿಯಿಂದ #CentralArmedForces ಕೇಂದ್ರ ಸಶಸ್ತ್ರ ಮೀಸಲು ಪಡೆ(ಸಿಆರ್’ಪಿಎಫ್)ನ 150 ಪಡೆಗಳನ್ನು ನಿಯೋಜನೆ ಮಾಡಲಿದೆ.
ಮಾಹಿತಿಯಂದ ಚುನಾವಣೆ ಘೋಷಣೆಗೂ ಮುನ್ನ ಅಂದಾಜು ಮಾರ್ಚ್ 7ಕ್ಕೂ ಮುನ್ನ ಕೇಂದ್ರ ಪಡೆ #CAPF ಪಶ್ಚಿಮ ಬಂಗಾಳ ತಲುಪಲಿದೆ ಎನ್ನಲಾಗಿದೆ.
ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಸಾರ್ವತ್ರಿಕ ಸಂಸತ್ತಿನ ಚುನಾವಣೆಗಳನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸಶಸ್ತ್ರ ಪಡೆಗಳನ್ನು ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post