ಕಲ್ಪ ಮೀಡಿಯಾ ಹೌಸ್ | ಮೀರತ್ |
ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನ ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ #Murder and seal in drum ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಬೆಳಕಿಗೆ ಬಂದಿದೆ.
ಐದು ವರ್ಷದ ಮಗಳ ಹುಟ್ಟುಹಬ್ಬ ಆಚರಿಸಲು ಲಂಡನ್‌ನಿಂದ ಮೀರತ್‌ಗೆ ಬಂದಿದ್ದ ನೌಕಾಧಿಕಾರಿ ಸೌರಭ್ ಕುಮಾರ್ ಎಂಬಾತನನ್ನು ಆತನ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ, ಆತನನ್ನು ಕೊಂದು ನಂತರ ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ, ಪ್ಲಾಸ್ಟಿಕ್ ಡ್ರಮ್‌ನಲ್ಲಿ ಹಾಕಿ ಸಿಮೆಂಟ್ ತುಂಬಿ ಸೀಲ್ ಮಾಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.
ಏನಿದು ಘಟನೆ?
ಸೌರಭ್ ಕುಮಾರ್ ಮತ್ತು ಮುಸ್ಕಾನ್ ಒಂಬತ್ತು ವರ್ಷಗಳ ಹಿಂದೆ 2016 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ಬಳಿಕ ಮರ್ಚೆಂಟ್ ನೇವಿಯಲ್ಲಿ ಕೆಲಸ ಪಡೆದಿದ್ದ. ಆದರೆ ಒಂದು ವರ್ಷದ ಬಳಿಕ ಆ ಕೆಲಸವನ್ನು ತೊರೆದ ಸೌರಭ್, ಮೀರತ್‌ನ ದೆಹಲಿ ರಸ್ತೆಯ ಒಂದು ಪ್ಲೈವುಡ್ ಅಂಗಡಿಯಲ್ಲಿ ಮೂರು ವರ್ಷ ಕೆಲಸ ಮಾಡಿದ್ದ. ಆ ನಂತರ ಲಂಡನ್‌ಗೆ ತೆರಳಿ ಅಲ್ಲಿನ ಒಂದು ಮಾಲ್‌ನಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಸೌರಭ್ ಮತ್ತು ಮುಸ್ಕಾನ್ ಜೋಡಿಗೆ ಐದು ವರ್ಷದ ಪಿಹು ಎಂಬ ಮಗಳಿದ್ದಳು. ಮೀರತ್‌ನ ಇಂದಿರಾನಗರದಲ್ಲಿ ಓಂಪಾಲ್ ಎಂಬವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಜೋಡಿ ಬಾಡಿಗೆಗೆ ವಾಸಿಸುತ್ತಿದ್ದರು.
Also read: ಅಂಬೇಡ್ಕರ್ ವಿಚಾರಧಾರೆ ಅನುಷ್ಠಾನ ಇಂದಿನ ಅಗತ್ಯ: ಪ್ರೊ. ಶ್ರೀಕಂಠಕೂಡಿಗೆ ಅಭಿಪ್ರಾಯ
ಮಾರ್ಚ್ 4ರ ರಾತ್ರಿ, ಸೌರಭ್‌ಗೆ ಮಾದಕ ದ್ರವ್ಯ ಕುಡಿಸಿದ ಬಳಿಕ ಮುಸ್ಕಾನ್ ಮತ್ತು ಪ್ರಿಯಕರ ಸಾಹಿಲ್ ಶುಕ್ಲಾ ಆತನ ಎದೆಗೆ ಚಾಕುವಿನಿಂದ ಇರಿದು, ಗಂಟಲು ಸೀಳಿ ಕೊಲೆ ಮಾಡಿ, ಬಳಿಕ ಶವವನ್ನು ಬಾತ್ ರೂಂ ಎಳೆದುಕೊಂಡು ಹೋಗಿ, ಇಬ್ಬರೂ ಸೇರಿ ದೇಹವನ್ನು 15 ತುಂಡುಗಳಾಗಿ ಕತ್ತರಿಸಿದ್ದಾರೆ. ದೇಹದ ತುಂಡುಗಳನ್ನು ಡ್ರಮ್‌ನಲ್ಲಿ ತುಂಬಿಸಿ, ನೀರು ಸುರಿದು ಸಿಮೆಂಟ್ ಮತ್ತು ಡಸ್ಚ್ ಹಾಕಿ ಅದನ್ನು ಮುಚ್ಚಿದ್ದ. ಇದೇ ಡ್ರಮ್ ನಲ್ಲಿ ಸೌರಭ್ ದೇಹ ಕತ್ತರಿಸಲು ಬಳಸಲಾಗಿದ್ದ ಚಾಕು, ಕತ್ತಿಗಳನ್ನು ಕೂಡ ಹಾಕಿ ಸಿಮೆಂಟ್ ನಿಂದ ಸೀಲ್ ಮಾಡಲಾಗಿತ್ತು.
ಸೌರಭ್ ರಜಪೂತ್ ಹಲವು ದಿನಗಳಿಂದ ಕಾಣದಿದ್ದಾಗ ಅವರ ಕುಟುಂಬ ದೂರು ದಾಖಲಿಸಿದೆ. ಅನುಮಾನದ ಮೇಲೆ, ಅವರ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಅವರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆಯ ಸಮಯದಲ್ಲಿ, ಮಾರ್ಚ್ 4 ರಂದು ಅವರು ಸೌರಭ್ ಅವರನ್ನು ಚಾಕುವಿನಿಂದ ಕೊಂದಿದ್ದಾರೆ ಎಂದು ಅವರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಆರೋಪಿಗಳು ಸೌರಭ್ ಶವವನ್ನು ಕತ್ತರಿಸಿ, ಡ್ರಮ್‌ನಲ್ಲಿ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದಾರೆ. ಪೊಲೀಸರು ಶವವನ್ನು ವಶಪಡಿಸಿಕೊಂಡು ಶವಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post